ಐಟಿ ಪದವೀಧರರಲ್ಲಿ ಶೇ 94 ಮಂದಿಗೆ ಕೌಶಲ್ಯದ ಕೊರತೆ: ಟೆಕ್ ಮಹೀಂದ್ರಾ ಸಿಇಓ...

ಜೈ ಶೇಗುಣಸಿ ಸುದ್ದಿ..

ದೇಶದ ಒಟ್ಟಾರೆ ಎಂಜಿನಿಯರಿಂಗ್‌ ಪದವೀಧರರಲ್ಲಿ ಉತ್ತಮ ಕಂಪನಿಗಳಲ್ಲಿ ಕೆಲಸ ಪಡೆಯುವವರು ಕೇವಲ ಶೇ.6ರಷ್ಟು ಮಾತ್ರ; ಶೇ 94 ಮಂದಿ ಐಟಿ ಪದವೀಧರರೂ ಉದ್ಯೋಗಕ್ಕೆ ಅನರ್ಹರಾಗಿರುತ್ತಾರೆ ಎಂದು ಟೆಕ್‌ ಮಹೀಂದ್ರ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಪಿ. ಗುರ್ನಾನಿ ಹೇಳಿದ್ದಾರೆ. 

ಟೈಮ್ಸ್‌ ಆಫ್‌ ಇಂಡಿಯಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಎಂಜಿನಿಯರಿಂಗ್‌ ಪದವೀಧರರಲ್ಲಿ ಕೌಶಲ್ಯದ ಕೊರತೆ ಇಂದಿನ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸೈಬರ್‌ ಸೆಕ್ಯುರಿಟಿ ಸೇರಿದಂತೆ ಮಾಹಿತಿ ತಂತ್ರಜ್ಞಾನದ ಅನೇಕ ವಿಭಾಗದಲ್ಲಿ ಉದ್ಯೋಗಗಳಿವೆ. ಆದರೆ ಆ ಸೀಟುಗಳನ್ನು ತುಂಬಲು ಅರ್ಹ ವ್ಯಕ್ತಿಗಳು ನಮ್ಮಲ್ಲಿ ಇಲ್ಲವಾಗಿದ್ದಾರೆ. ಒಟ್ಟಾರೆ ಎಂಜಿನಿಯರಿಂಗ್‌ ಪದವೀಧರರಲ್ಲಿ ಶೇ.96ರಷ್ಟು ಅಭ್ಯರ್ಥಿಗಳು ಐಟಿ ವಿಭಾಗದಲ್ಲಿ ಕೆಲಸ ಮಾಡಲು ಅರ್ಹರಾಗಿರುವುದಿಲ್ಲ ಎಂದು ಹೇಳಿದ್ದಾರೆ. 

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೈಬರ್‌ ಸೆಕ್ಯುರಿಟಿ ವಿಭಾಗಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಎಲ್ಲ ಹೊಸ ಸಂಸ್ಥೆಗಳಿಗೆ ಭದ್ರತೆ ಒದಗಿಸುವುದು ಕಷ್ಟವಾಗುತ್ತಿದೆ. ಕೇವಲ ಪಾಸ್‌ವರ್ಡ್‌ಗಳಿಂದ ಇಂದು ಭದ್ರತೆ ಒದಗಿಸುವುದು ಕಷ್ಟಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಅಮೆರಿಕದ ಎಚ್‌-1ಬಿ ವೀಸಾ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಯೊಂದ ಐಟಿ ಸಂಸ್ಥೆ, ವೀಸಾ ವಿಚಾರದಲ್ಲಿ ತನ್ನದೇ ಆದ ಕಾರ್ಯತಂತ್ರಗಳನ್ನು ಅಳವಡಿಸಿಕೊಂಡಿದ್ದಾರೆ. ಯುಎಸ್‌ಎ ಪ್ರತಿಭಾವಂತರಿಗೆ ಅತ್ಯುತ್ತಮ ವೇದಿಕೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಸಣ್ಣ ವಿಚಾರವನ್ನು ದೊಡ್ಡ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು. 

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18